Saturday, June 28, 2025
Homeಕರಾವಳಿಕಾಸರಗೋಡುಕಾಸರಗೋಡು: ಮದುವೆಗೆ ಕೆಲವೇ ದಿನಗಳಿರುವಾಗ ಯುವಕ ಆತ್ಮಹತ್ಯೆ

ಕಾಸರಗೋಡು: ಮದುವೆಗೆ ಕೆಲವೇ ದಿನಗಳಿರುವಾಗ ಯುವಕ ಆತ್ಮಹತ್ಯೆ

spot_img
- Advertisement -
- Advertisement -

ಕಾಸರಗೋಡು: ಮದುವೆಗೆ ಕೆಲವೇ ದಿನಗಳಿರುವಾಗ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಸಂಜೆ ಮೀಂಜ ಸಮೀಪದ ಬೆಜ್ಜದಲ್ಲಿ ನಡೆದಿದೆ. ಅಜಿತ್ ಕುಮಾರ್ (28) ಆತ್ಮಹತ್ಯೆಗೆ ಶರಣಾದ ಯುವಕ.

ಅಜಿತ್ ಕುಮಾರ್ ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ನ ಉಪ್ಪಳ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇವರಿಗೆ ಹೊಸಂಗಡಿ ಸಮೀಪದ ಯುವತಿ ಜೊತೆ ಫೆಬ್ರವರಿ ಎರಡರಂದು ವಿವಾಹ ನಿಗದಿಯಾಗಿತ್ತು. ಅದಕ್ಕಾಗಿ ಮನೆಯವರು ವಿವಾಹಕ್ಕೆ ತಯಾರಿಗಾಗಿ ಸಾಮಾಗ್ರಿಗಳನ್ನು ಖರೀದಿಸಲು ಪೇಟೆಗೆ ತೆರಳಿದ್ದರು. ಮನೆಯಲ್ಲಿ ಚಿಕ್ಕಪ್ಪ ಮಾತ್ರ ಇದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಜೆ ಅಜಿತ್ ಮನೆ ಮುಂಭಾಗದ ಮಾವಿನ ಮರದಲ್ಲಿ ಕೇಬಲ್ ವಯರ್ ನಲ್ಲಿ ನೇಣು ಬಿಗಿದಿರುವುದನ್ನು ಮನೆಯವರು ಗಮನಿಸಿದ್ದು, ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಮೃತಪಟ್ಟಿದ್ದರು. ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

v

- Advertisement -
spot_img

Latest News

error: Content is protected !!