- Advertisement -
- Advertisement -
ಬಂಟ್ವಾಳ; ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ.ಇಲ್ಲಿನ ಶೇಖರ ಅವರ ಎರಡನೇ ಮಗ ರಮೇಶ್ (27) ಮೃತ ಯುವಕ.
ರಮೇಶ್ ಮೊದಲಿಗೆ ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸೌಮ್ಯ ಸ್ವಭಾವದವನಾಗಿದ್ದ ರಮೇಶ್ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ.ಈತನ ಅಣ್ಣಾ ಕೂಡ ಕಳೆದ ವರ್ಷ ಇವರ ಹಳೇಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಶೇಖರ ಪೂಜಾರಿ ಅವರಿಗೆ ಇಬ್ಬರು ಗಂಡು ಮಕ್ಕಳು, ಇದೀಗ ಇಬ್ಬರು ಕೂಡ ಆತ್ಮಹತ್ಯೆ ಮಾಡಿಕೊಂಡಂತಾಗಿದೆ. ಬಂಟ್ವಾಳ ನಗರ ಠಾಣಾ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -