Thursday, June 4, 2026
Homeಕರಾವಳಿಸುಳ್ಯದ ದುಗಲಡ್ಕದಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ

ಸುಳ್ಯದ ದುಗಲಡ್ಕದಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ

- Advertisement -
- Advertisement -

ಸುಳ್ಯ: ವಿಷ ಸೇವಿಸಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ದುಗಲಡ್ಕದಲ್ಲಿ ನಡೆದಿದೆ. ದುಗಲಡ್ಕ ನೀರಬಿದಿರೆ ನಿವಾಸಿ ದೇವನಾಥ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ನಗರ ಪಂಚಾಯತ್ ನಲ್ಲಿ ಕಸ ಸಂಗ್ರಹ ಮತ್ತು ವಿಲೇವಾರಿ ಘಟಕದಲ್ಲಿ ಪೌರ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ದೇವನಾಥ್, ನಿನ್ನೆ ವಿಷ ಸೇವಿಸಿದ್ದು, ಕೂಡಲೇ ವಿಷಯ ತಿಳಿದ ಸ್ನೇಹಿತರು ಸುಳ್ಯದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟು ಹೊತ್ತಿಗಾಗಲೇ ಮೃತಪಟ್ಟಿದ್ದಾರೆ.

ಇನ್ನು ಸುಳ್ಯ ನಗರ ಪಂಚಾಯತ್ ನಲ್ಲಿ ದೇವನಾಥ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.ಈ ವೇಳೆ ಸಚಿವ ಎಸ್.ಅಂಗಾರ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

- Advertisement -

Latest News

error: Content is protected !!