Thursday, June 4, 2026
Homeಕರಾವಳಿಮಂಗಳೂರು;ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ಮಂಗಳೂರು;ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

- Advertisement -
- Advertisement -

ಮಂಗಳೂರು;ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಣಾಜೆ ಸಮೀಪದ ಮುಚ್ಚಿಲಕೋಡಿ ಎಂಬಲ್ಲಿ ನಡೆದಿದೆ. ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಆತ್ಮಹತ್ಯೆ ಮಾಡಿಕೊಂಡವರು. ಪತ್ನಿಯ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಲವು ವರ್ಷಗಳಿಂದ ಇವರು ಮುಡಿಪುವಿನ ಇನ್ಫೋಸಿಸ್ ಸಂಸ್ಥೆಯ ಗಾರ್ಡನ್ ಕೆಲಸ ನಿರ್ವಹಿಸುತ್ತಿದ್ದ ಹರೀಶ್ ಅವರು ಸಿದ್ದಕಟ್ಟೆ ಸಂಗಬೆಟ್ಟು ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಇದೀಗ ಆಕೆ 7 ತಿಂಗಳ ಗರ್ಭಿಣಿ.. ಮಾ.12ರಂದು ಹರೀಶ್ ತನ್ನ ತಾಯಿಯ ಅಕ್ಕನ ಮಗನಾಗಿರುವ ಕೊಣಾಜೆ ಮುಚ್ಚಿಲಕೋಡಿ ನಿವಾಸಿ ರಮೇಶ್ ಶೆಟ್ಟಿಗಾರ್ ಎಂಬವರಿಗೆ ಕರೆ ಮಾಡಿ ತನ್ನ ಬ್ಯಾಗಿನಲ್ಲಿ ಭಸ್ಮ, ತಗಡು ದೊರೆತಿದ್ದು, ವಾಮಾಚಾರ ಮಾಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಹೋದರ ರಮೇಶ್ ಮಾ.19ರಂದು ಮನೆಗೆ ಬಂದು ಮಾತನಾಡುವ ಎಂದು ತಿಳಿಸಿರುವಂತೆ ಹರೀಶ್ ಅವರು ಮಾತುಕತೆಗೆಂದು ಬಂದಿದ್ದರು. ಆದರೆ ಬರುವಾಗಲೇ ಕೈಯಲ್ಲಿ ಪೆಟ್ರೋಲ್ ಅನ್ನು ಕ್ಯಾನಿನಲ್ಲಿ ಹಿಡಿದುಕೊಂಡು ಬಂದಿದ್ದಾರೆ. ಮಾತುಕತೆ ಆರಂಭವಾಗುವ ಮುನ್ನವೇ ಅಂಗಳದಲ್ಲಿ ಮೈಪೂರ್ತಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಮಂದಿ ಗಾಬರಿಗೊಂಡು ಕೊಣಾಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಹರೀಶ್ ಸಾವನ್ನಪ್ಪಿದ್ದಾರೆ. ಅರೆಬೆಂದ ಸ್ಥಿತಿಯಲ್ಲಿದ್ದ ಹರೀಶ್ ಖುದ್ದಾಗಿಯೇ ಆಂಬ್ಯುಲೆನ್ಸ್ ಹತ್ತಿದ್ದರು ಎಂದು ತಿಳಿದುಬಂದಿದೆ.ಕೊಣಾಜೆ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!