Friday, June 5, 2026
Homeಕರಾವಳಿಪುತ್ತೂರು; ಪಂಜಳದಲ್ಲಿ ನೇಣು ಬಿಗಿದುಕೊಂಡು ಯುವಕ‌ ಆತ್ಮಹತ್ಯೆ

ಪುತ್ತೂರು; ಪಂಜಳದಲ್ಲಿ ನೇಣು ಬಿಗಿದುಕೊಂಡು ಯುವಕ‌ ಆತ್ಮಹತ್ಯೆ

- Advertisement -
- Advertisement -

ಪುತ್ತೂರು: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳ ಎಂಬಲ್ಲಿ ನಡೆದಿದೆ.

ವಿಶ್ವನಾಥ್ ಅಲಿಯಾಸ್ ವೇಣು (32) ಆತ್ಮಹತ್ಯೆ‌‌ ಮಾಡಿಕೊಂಡ ಯುವಕ. ಪಂಜಳದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವಿಶ್ವನಾಥ್ ಅವರು ಆತ್ಮಹತ್ಯೆ ಮಾಡಿಕೊಡಿದ್ದಾರೆ.

ವಿಶ್ವನಾಥ್ ಅನಾರೋಗ್ಯದಿಂದ ಮನನೊಂದು ಫ್ಯಾನಿಗೆ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತ ಯುವಕನ ತಂದೆ ನೀಡಿದ ದೂರಿನಂತೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!