Saturday, June 6, 2026
Homeಕರಾವಳಿಮಂಗಳೂರು; ಉಳ್ಳಾಲದಲ್ಲಿ ಕೆರೆಯಲ್ಲಿ ಮುಳುಗಿ ಯುವಕ ಸಾವು

ಮಂಗಳೂರು; ಉಳ್ಳಾಲದಲ್ಲಿ ಕೆರೆಯಲ್ಲಿ ಮುಳುಗಿ ಯುವಕ ಸಾವು

- Advertisement -
- Advertisement -

ಮಂಗಳೂರು; ಕೆರೆಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಉಳ್ಳಾಲದ ತಲಪಾಡಿಯಲ್ಲಿ ನಡೆದಿದೆ.ದುರ್ಗಿಪಳ್ಳ ನಿವಾಸಿ ಹರೀಶ ಯಾನೆ ಹರಿ ಪ್ರಸಾದ್ ಆಚಾರ್ಯ (36) ದುರ್ದೈವಿ.

ಅವಿವಾಹಿತರಾಗಿದ್ದ ಹರಿಪ್ರಸಾದ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ವಿಪರೀತ ಕುಡಿತ ಚಟ ಹೊಂದಿದ್ದರಂತೆ.ಕಳೆದ ನಾಲ್ಕು ದಿವಸಗಳಿಂದ ಮನೆಗೂ ಹೋಗಿರಲಿಲ್ಲ ಎನ್ನಲಾಗಿದೆ.ಹರಿಪ್ರಸಾದ್ ಯುವರಾಜ್ ಯಾನೆ ಮುನ್ನ,‌ ಲೋಹಿತ್, ನವೀನ್ ದೇವಾಡಿಗ, ನಿತೇಶ್ ಉಚ್ಚಿಲ್ ಎಂಬವರೊಂದಿಗೆ ಸಮೀಪದ ಖಾಸಗಿ ಲೇ ಔಟ್‌ ನಲ್ಲಿರುವ ಕೆರೆಗೆ ಸ್ನಾನಕ್ಕೆ ತೆರಳಿದ್ದ ಸಂದರ್ಭ ಅಕಸ್ಮತ್‌ ಆಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

- Advertisement -

Latest News

error: Content is protected !!