Friday, June 5, 2026
Homeಕರಾವಳಿಬಂಟ್ವಾಳ; ಮಲಗಿದಲ್ಲೇ ಹೃದಯಾಘಾತವಾಗಿ ಯುವಕ ಸಾವು

ಬಂಟ್ವಾಳ; ಮಲಗಿದಲ್ಲೇ ಹೃದಯಾಘಾತವಾಗಿ ಯುವಕ ಸಾವು

- Advertisement -
- Advertisement -

ಬಂಟ್ವಾಳ; ಮಲಗಿದಲ್ಲೇ ಹೃದಯಾಘಾತವಾಗಿ ಯುವಕ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ ಬಂಟ್ವಾಳದ ಮೆಲ್ಕಾರ್‌ ನಲ್ಲಿ ನಡೆದಿದೆ.

ಮೆಲ್ಕಾರ್ ನಿವಾಸಿ ಉದಯ ( 36) ಮೃತಪಟ್ಟ ಯುವಕ. ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ಗ್ರಂಥಪಾಲಕನಾಗಿ ಕೆಲಸ ಮಾಡುತ್ತಿದ್ದ  ಉದಯ್ ಅವರು ಅನೇಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಜನಸ್ನೇಹಿಯಾಗಿ, ಜನಸೇವಕನಾಗಿದ್ದ ಉದಯ ಅವರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು.

ಇಂದು ಬೆಳಿಗ್ಗೆ ಉದಯ ಎದ್ದ ಹೇಳಲಿಲ್ಲ ಎಂದು ಮನೆಯವರು ಎಬ್ಬಿಸಿದಾಗ ಯಾವುದೇ ಪ್ರತಿಕ್ರಿಯೆ ಇಲ್ಲದಿರುವುದು ಗಮನಿಸಿ, ಆಸ್ಪತ್ರೆಗೆ ಕರೆ ತಂದಿದ್ದಾರೆ. ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಆತ ಹೃದಯಾಘಾತದಿಂದ ನಿಧನರಾಗಿರುವ ಬಗ್ಗೆ ತಿಳಿಸಿದ್ದಾರೆ.ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!