Friday, June 5, 2026
Homeಕರಾವಳಿಉಡುಪಿಕಾರ್ಕಳ: ಬೈಕ್ ಗೆ ಕಾರು ಡಿಕ್ಕಿಯಾಗಿ ಯುವಕ ಸಾವು

ಕಾರ್ಕಳ: ಬೈಕ್ ಗೆ ಕಾರು ಡಿಕ್ಕಿಯಾಗಿ ಯುವಕ ಸಾವು

- Advertisement -
- Advertisement -

ಕಾರ್ಕಳ: ಬೈಕ್ ಗೆ ಕಾರು ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ನಡೆದಿದೆ.

ಮೃತರನ್ನು ಶಿವಪುರ ಮೂರ್ಸಾಲು ನಿವಾಸಿ ರಾಹುಲ್(25) ಮೃತ ಯುವಕ. ಹೆಬ್ರಿ ಕಡೆಯಿಂದ ಶಿವಪುರ ಕಡೆಗೆ ಹೋಗುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಸವಾರ ರಾಹುಲ್ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ರಾಹುಲ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಜ.5ರಂದು ಬೆಳಗ್ಗೆ 7 ಗಂಟೆಗೆ ಸುಮಾರಿಗೆ ಮೃತಪಟ್ಟಿದ್ದಾರೆ.ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!