Thursday, June 4, 2026
Homeಕರಾವಳಿಉಡುಪಿಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು

- Advertisement -
- Advertisement -

ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಹನೆಹಳ್ಳಿ ಸಮೀಪ ನಡೆದಿದೆ. ಚಾಂತಾರಿನ ಹರಿಪ್ರಸಾದ್‌ (29) ಮೃತ ದುರ್ದೈವಿ.

ಆನ್‌ ಲೈನ್‌ ಕಂಪೆನಿಯ ಡೆಲಿವರಿ ಕೆಲಸ ಮಾಡುತ್ತಿದ್ದ ಅವರು ರಸ್ತೆ ಬದಿಯಲ್ಲಿ ಬೈಕ್‌ ನಿಲ್ಲಿಸಿ ಗ್ರಾಹಕರಿಗೆ ಕರೆ ಮಾಡಿ ವಿಳಾಸ ಕೇಳುತ್ತಿದ್ದ ಸಂದರ್ಭ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದಿತ್ತು ಎನ್ನಲಾಗಿದೆ. 

ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಫ‌ಲಕಾರಿಯಾಗಲಿಲ್ಲ. ಈ ಕುರಿತು ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!