Wednesday, June 24, 2026
Homeಕರಾವಳಿಮಂಗಳೂರುಬೆಳ್ಳಾರೆ; ಸಂಬಂಧಿಕರಿಗೆ ಶಬರಿ ಮಲೆಯ ಪ್ರಸಾದ ನೀಡಲು ತೆರಳುತ್ತಿದ್ದಾಗ ಬೈಕ್ ಅಪಘಾತ: ಕಡಬದ ಮರ್ದಾಳದ ಯುವಕ...

ಬೆಳ್ಳಾರೆ; ಸಂಬಂಧಿಕರಿಗೆ ಶಬರಿ ಮಲೆಯ ಪ್ರಸಾದ ನೀಡಲು ತೆರಳುತ್ತಿದ್ದಾಗ ಬೈಕ್ ಅಪಘಾತ: ಕಡಬದ ಮರ್ದಾಳದ ಯುವಕ ಸಾವು, ತಂದೆಗೆ ಗಂಭೀರ ಗಾಯ

- Advertisement -
- Advertisement -

ಬೆಳ್ಳಾರೆ; ಸಂಬಂಧಿಕರಿಗೆ ಶಬರಿ ಮಲೆಯ ಪ್ರಸಾದ ನೀಡಲು ತೆರಳುತ್ತಿದ್ದಾಗ ಬೈಕ್ ಅಪಘಾತ: ಕಡಬದ ಮರ್ದಾಳದ ಯುವಕ ಸಾವು, ತಂದೆಗೆ ಗಂಭೀರ ಗಾಯವಾಗಿರುವ ಘಟನೆ ಬೆಳ್ಳಾರೆ ಸಮೀಪದ ಕಲ್ಲೋಣಿಯಲ್ಲಿ ನಡೆದಿದೆ.

ಮರ್ದಾಳ ಸಮೀಪದ ಕೊಲ್ಯ ನಿವಾಸಿ ನಿಶಾಂತ್ ಮೃತ ಯುವಕ. ಇವರ ತಂದೆ ಮೋನಪ್ಪ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬೈಕ್ ಮೋರಿಯಿಂದ ಕೆಳಕ್ಕೆ ಬಿದ್ದ ರಭಸಕ್ಕೆ ನಿಶಾಂತ್ ಅವರಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಎದುರಿನಿಂದ ಬಂದ ವಾಹನವೊಂದನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆಯೇ ಅಥವಾ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಘಟನಾ ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣಕ್ಕಾಗಿ ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!