ಬಂಟ್ವಾಳ; ಬೈಕಿಗೆ ಖಾಸಗಿ ಬಸ್ ಡಿಕ್ಕಿ, ಓರ್ವ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕಡೆಗೋಳಿ ನಿವಾಸಿ ಪ್ರವೀಣ (30) ಮೃತ ದುರ್ದೈವಿ. ಅವರ, ಸ್ನೇಹಿತ ಸಂದೀಪ ಗಂಭೀರವಾಗಿ ಗಾಯಗೊಂಡವರು.
ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಸೆಲೀನಾ ಎಂಬ ಖಾಸಗಿ ಬಸ್ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿದೆ. ಗಾಯಗೊಂಡ ಸಂದೀಪ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಪ್ರವೀಣ ಹಾಗೂ ಸ್ನೇಹಿತ ಸಂದೀಪ ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಚಾಲಕನ ವಿರುದ್ಧ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.