Friday, June 5, 2026
Homeಕರಾವಳಿಉಡುಪಿಕಾರ್ಕಳ: ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು

ಕಾರ್ಕಳ: ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ: ಯುವಕ ಸ್ಥಳದಲ್ಲೇ ಸಾವು

- Advertisement -
- Advertisement -

ಕಾರ್ಕಳ: ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿಯಾಗಿ ಬೈಕ್ ಚಲಾಯಿಸುತ್ತಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದ ಅಡಪಾಡಿ ಸಮೀಪ ನಡೆದಿದೆ. ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಮೃತ ಯುವಕ.

ಗಣೇಶ್ ನಾಯಕ್ ಅವರು ತನ್ನ ಬೈಕ್‌ನಲ್ಲಿ ಹಂಪನಕಟ್ಟೆ ಕಡೆಗೆ ಹೋಗುತ್ತಿರುವಾಗ ಆರೋಪಿ ತನ್ನ ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರ್‌ ಸೈಕಲ್‌ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಗಣೇಶ ನಾಯಕ್‌ ಬೈಕ್ ಸಮೇತ ರಸ್ತೆಯಲ್ಲಿ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಟಿಪ್ಪರ್‌ ಲಾರಿಯ ಹಿಂಬದಿಯ ಟಯರ್‌ ಹೆಲ್ಮೆಟ್ ಹಾಕಿದ ಗಣೇಶ ನಾಯಕ್‌ ಅವರ ತಲೆಯ ಮೇಲೆ ಹರಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಗಣೇಶ ನಾಯಕ್‌ ಅವರು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!