Wednesday, June 3, 2026
Homeಕರಾವಳಿಮಂಗಳೂರುಮಂಗಳೂರು; ಭೂತಕೋಲಕ್ಕೆ ಹೋಗಿ ಬರುವಾಗ ಕಾರು ಡಿವೈಡರ್ ಗೆ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು

ಮಂಗಳೂರು; ಭೂತಕೋಲಕ್ಕೆ ಹೋಗಿ ಬರುವಾಗ ಕಾರು ಡಿವೈಡರ್ ಗೆ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು; ಭೂತಕೋಲಕ್ಕೆ ಹೋಗಿ ಬರುವಾಗ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ನಂತೂರಿನಲ್ಲಿ ನಡೆದಿದೆ. ತೊಕ್ಕೊಟ್ಟಿನ ಹಿರಿಯ ಬಿಜೆಪಿ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಮೃತ ಯುವಕ.


ಶಮಿತ್ ನಿನ್ನೆ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ಭೂತ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ.

- Advertisement -

Latest News

error: Content is protected !!