Wednesday, June 24, 2026
Homeಕರಾವಳಿಉಡುಪಿಉಡುಪಿ: ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆ ಡಿವೈಡರ್ ಗೆ ಡಿಕ್ಕಿ, ಸವಾರ ಸಾವು

ಉಡುಪಿ: ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆ ಡಿವೈಡರ್ ಗೆ ಡಿಕ್ಕಿ, ಸವಾರ ಸಾವು

- Advertisement -
- Advertisement -

ಉಡುಪಿ: ನಿಯಂತ್ರಣ ತಪ್ಪಿ ಸ್ಕೂಟರ್ ರಸ್ತೆ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಮುದ್ರಂಗಡಿಯಲ್ಲಿನ ನಡೆದಿದೆ.ಕುತ್ಯಾರು ಕೆಂಜ ಹಿಟ್ಟು ನಿವಾಸಿ ಜೋಸ್ವಿನ್ ಡಿಸೋಜಾ (22) ಮೃತರು.

ಜೋಸ್ಟಿನ್ ಗುರುವಾರ ತಡರಾತ್ರಿ ಮುದ್ರಂಗಡಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕುತ್ಯಾರುದಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಕುತ್ಯಾರು ಜಿಲ್ಲೆಯ ಗೋಳಿಕಟ್ಟೆಯ ಸಮೀಪ ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯ ನಿವಾಸಿಗಳು ಅವರನ್ನು ಮಣಿಪಾಲದ ಆಸ್ಪತ್ರೆಗೆ ಸಾಗಿಸಿದರು, ಆದರೆ ದಾರಿಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!