Saturday, June 6, 2026
Homeಕರಾವಳಿಪುತ್ತೂರು: ಸ್ಕೂಟರ್ ಮೇಲೆ ಕುಳಿತಿದ್ದ ಯುವಕನಿಗೆ ಕಾರು ಢಿಕ್ಕಿ, ಚಿಕಿತ್ಸೆ ಫಲಿಸದೇ ಸಾವು

ಪುತ್ತೂರು: ಸ್ಕೂಟರ್ ಮೇಲೆ ಕುಳಿತಿದ್ದ ಯುವಕನಿಗೆ ಕಾರು ಢಿಕ್ಕಿ, ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಪುತ್ತೂರು: ಸ್ಕೂಟರ್ ಮೇಲೆ ಕುಳಿತಿದ್ದ ಯುವಕನಿಗೆ ಕಾರು ಢಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಕೆದಿಲ ಗ್ರಾಮದ ಸತ್ತಿಕಲ್ಲು ಎಂಬಲ್ಲಿ ನಡೆದಿದೆ. ಕೆದಿಲ ಗ್ರಾಮದ ಸತ್ತಿಕಲ್ಲು ನಿವಾಸಿ ಉಸ್ಮಾನ್ (26) ಮೃತ ಯುವಕ. ಜ. 15ರಂದು ಘಟನೆ ಸಂಭವಿಸಿದೆ.

ಉಸ್ಮಾನ್ ರಸ್ತೆಯ ಎಡ ಬದಿಯ ಮಣ್ಣು ರಸ್ತೆಯಲ್ಲಿ ಸ್ಕೂಟರನ್ನು ನಿಲ್ಲಿಸಿ ಸ್ಕೂಟರಿನ ಮೇಲೆ ಕುಳಿತುಕೊಂಡು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗ ಚಾಲಕ ಸದಾಶಿವ ಶೆಟ್ಟಿ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಸವಾರ ಚರಂಡಿಗೆ ಎಸೆಯಲ್ಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಸರ್ವಾಣಿ, ಮೀನಾಕ್ಷಿ, ಪವಿತ್ರಾ ಶೆಟ್ಟಿ, ನಂದನ್ ರೈ ಗಾಯಗೊಂಡಿದ್ದಾರೆ.

- Advertisement -

Latest News

error: Content is protected !!