Thursday, June 4, 2026
Homeಕರಾವಳಿಸುಳ್ಯ; ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಯುವಕ ಸಾವು

ಸುಳ್ಯ; ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಯುವಕ ಸಾವು

- Advertisement -
- Advertisement -

ಸುಳ್ಯ; ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಯುವಕನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದಲ್ಲಿ ನಡೆದಿದೆ. ಚರಣ್ ಕುಞೇಟಿ(28) ಮೃತ ಯುವಕ.

ಚರಣ್ ಕಳೆದ ಕೆಲ ತಿಂಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಫೆ.28 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಮೃತರು ತಂದೆ ಕೊಲ್ಲಮೊಗ್ರದ ಪೋಸ್ಟ್ ಮಾಸ್ಟರ್ ಚಂದ್ರಶೇಖರ್, ತಾಯಿ ಕಲಾವತಿ, ಸಹೋದರ ವಚನ್ ಹಾಗೂ ಕುಟುಂಬಸ್ಥರು ಸೇರಿದಂತೆ ಬಂಧು-ಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!