Friday, June 5, 2026
Homeಕರಾವಳಿಉಡುಪಿಉಡುಪಿ; ನದಿಗೆ ಕಾಲು ಜಾರಿ ಬಿದ್ದು ಯುವಕ ಸಾವು

ಉಡುಪಿ; ನದಿಗೆ ಕಾಲು ಜಾರಿ ಬಿದ್ದು ಯುವಕ ಸಾವು

- Advertisement -
- Advertisement -

ಉಡುಪಿ; ನದಿಗೆ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ತಿಂಗಳೆ ಸೀತಾನದಿಯಲ್ಲಿ ಎ. 26ರಂದು ನಡೆದಿದೆ. ಹೆಬ್ರಿ ಕಿನ್ನಿ ಗುಡ್ಡೆ ನಿವಾಸಿ ಸುಧಾಕರ್ ಶೆಟ್ಟಿ ಅವರ ಪುತ್ರ ಸಂಕೇತ್ ಶೆಟ್ಟಿ (24) ಮೃತ ಯುವಕ.

ಸ್ನೇಹಿತರೊಂದಿಗೆ ನದಿಗೆ ಸ್ಥಾನಕ್ಕೆ ತೆರಳಿದಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಹೆಬ್ರಿ ಗ್ರಾಮ ಪಂಚಾಯತ್‌ನ ಅಂಗವಿಕಲರ ಪುನರ್‌ವಸತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಇವರು ಹೆಬ್ರಿ ಜೆಸಿಐ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದರು. ಎಲ್ಲರೊಂದಿಗೆ ಸದಾ ನಗುಮೊಗದೊಂದಿಗೆ ಬೆರೆಯುತ್ತಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!