Friday, June 5, 2026
Homeಕರಾವಳಿಮಂಗಳೂರು; ನದಿಯಲ್ಲಿ ಮುಳುಗಿ ಯುವಕ ಸಾವು

ಮಂಗಳೂರು; ನದಿಯಲ್ಲಿ ಮುಳುಗಿ ಯುವಕ ಸಾವು

- Advertisement -
- Advertisement -

ಮಂಗಳೂರು; ನದಿಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಸುರತ್ಕಲ್ ನ ಮರವೂರು ರೈಲ್ವೇ ಸೇತುವೆಯ ಬಳಿ ನಡೆದಿದೆ. ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟು ನಿವಾಸಿ ಶಾಕಿರ್‌ (30) ಮೃತ ದುರ್ದೈವಿ.

ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು .ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಬಂದು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!