Thursday, June 25, 2026
Homeಕರಾವಳಿಉಡುಪಿಉಡುಪಿ; ದುಬೈಗೆ ಓದಲು ತೆರಳಿದ್ದ ಯುವಕ ಸಾವು

ಉಡುಪಿ; ದುಬೈಗೆ ಓದಲು ತೆರಳಿದ್ದ ಯುವಕ ಸಾವು

- Advertisement -
- Advertisement -

ಉಡುಪಿ; ದುಬೈಗೆ ಓದಲೆಂದು ತೆರಳಿದ್ದ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ವಿದ್ಯಾರ್ಥಿ ದುಬೈಯಲ್ಲಿ ಅನಾರೋಗ್ಯಕ್ಕೀಡಾಗಿ ಮೃತಪಟ್ಟ ಘಟನೆ ನಡೆದಿದೆ.ಕಾಪು ತಾಲೂಕಿನ ಅಹ್ಮದ್ ಬಿಲಾಲ್(20) ಮೃತ ಯುವಕ.

ಉಡುಪಿಯಲ್ಲಿ ದ್ವಿತೀಯ ಪಿಯುಸಿ ಮುಗಿಸಿ ಬಿಲಾಲ್ ದುಬೈಗೆ ಪದವಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದರು. ಕೆಲ ದಿನಗಳಿಂದ ಜ್ವರ ಬಂದು ಬಳಿಕ ನ್ಯುಮೋನಿಯಾದಿಂದ ಚಿಕಿತ್ಸೆಗಾಗಿ ಶಾರ್ಜಾದಲ್ಲಿರುವ ಕುವೈಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 20 ದಿನಗಳಿಂದ ಬಿಲಾಲ್ ಚಿಕಿತ್ಸೆ ಪಡೆಯುತ್ತಿದ್ದ. ಇದರಿಂದ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಡಿ 5ರ ಸೋಮವಾರದಂದು ನಿಧನರಾಗಿದ್ದಾರೆ ಎನ್ನಲಾಗಿದೆ.

ಬಿಲಾಲ್ ತಂದೆ 35 ವರ್ಷಗಳಿಂದ ದುಬೈಯಲ್ಲಿ ಅನಿವಾಸಿ ಭಾರತೀಯನಾಗಿ ದುಡಿಯುತ್ತಿದ್ದ ಹಿನ್ನೆಲೆಯಲ್ಲಿ, ಪದವಿ ಶಿಕ್ಷಣ ಕಲಿಯಲು ಬಿಲಾಲ್ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ದುಬೈಗೆ ತೆರಳಿದ್ದರು ಎನ್ನಲಾಗಿದೆ. ಮೃತದೇಹದ ಅಂತ್ಯ ಸಂಸ್ಕಾರವು ದುಬೈಯ ಅಲ್ಕೂಝ್ ಮಸೀದಿಯಲ್ಲಿ ಸೋಮವಾರ ರಾತ್ರಿ ನಡೆಯಲಿದೆ. ಸದ್ಯ ಬಿಲಾಲ್ ಕುಟುಂಬ ದುಬೈನಲ್ಲಿದೆ ಎಂದು ಬಿಲಾಲ್ ಸಂಬಂಧಿ ಆಸಿಫ್ ಉಚ್ಚಿಲ ಮಾಹಿತಿ ನೀಡಿದ್ದಾರೆ.

ತಂದೆ ಅಬ್ದುಸ್ಸಲಾಂ ಸೂರಿಂಜೆ, ತಾಯಿ ಝೀನತ್ ಗುರುಪುರ ಸೇರಿದಂತೆ ಇಬ್ಬರು ಸಹೋದರಿಯರು, ಒಬ್ಬ ಸಹೋದರ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!