Tuesday, July 14, 2026
Homeಕರಾವಳಿಪುತ್ತೂರು: ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ

ಪುತ್ತೂರು: ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಆರೋಪಿಯನ್ನು ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ. ಮಂಗಳೂರಿನ ಉದಯ(40) ಬಂಧಿತ ಆರೋಪಿ.

 ಆರೋಪಿ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್‌ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಿದ್ದಾರೆ. ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

- Advertisement -

Latest News

error: Content is protected !!