Saturday, June 6, 2026
Homeಕರಾವಳಿಪುತ್ತೂರು; ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ; ಯುವಕನನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು; ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ; ಯುವಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಪುತ್ತೂರು; ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಪುತ್ತೂರಿನ ಕಲ್ಲಿಮಾರು ಎಂಬಲ್ಲಿ ನಡೆದಿದೆ.

ನಿನ್ನೆ ಬೆಳಿಗ್ಗೆ ಎಂದಿನಂತೆ ವಿದ್ಯಾರ್ಥಿನಿಯರಿಬ್ಬರು ಮನೆಯಿಂದ ಕಾಲೇಜಿಗೆ ತೆರಳುತ್ತಿದ್ದಾಗ ದಾರಿಯಲ್ಲಿ ಬಂದ ಯುವಕನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಆತನಿಂದ ತಪ್ಪಿಸಿಕೊಂಡು ಬಂದ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದು ಕಾಲೇಜಿನ ಉಪನ್ಯಾಸಕಿಗೆ ಮಾಹಿತಿ ನೀಡಿದ್ದಾರೆ.

ಇನ್ನು ಈ ಯುವಕ ಕಡಬ ತಾಲೂಕಿನ ಬೆಳಂದೂರು ಮೂಲದವನು ಎನ್ನಲಾಗಿದೆ. ಈ ಬಗ್ಗೆ ಕಾಲೇಜಿನ ಉಪನ್ಯಾಸಕಿ ನೀಡಿದ ದೂರಿನಂತೆ  ಪುತ್ತೂರು ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!