Thursday, June 4, 2026
Homeಕರಾವಳಿಬಂಟ್ವಾಳ: ನೇತ್ರಾವದಿ ನದಿಯಲ್ಲಿ ಈಜಲು ಹೋಗಿ ಯುವಕ ನೀರುಪಾಲು ಪ್ರಕರಣ: ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ...

ಬಂಟ್ವಾಳ: ನೇತ್ರಾವದಿ ನದಿಯಲ್ಲಿ ಈಜಲು ಹೋಗಿ ಯುವಕ ನೀರುಪಾಲು ಪ್ರಕರಣ: ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಅಶ್ವಿತ್ ಮೃತದೇಹ ಪತ್ತೆ

- Advertisement -
- Advertisement -

ಬಂಟ್ವಾಳ: ಇಲ್ಲಿನ ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ಉಕ್ಕಿ ಹರಿಯುತ್ತಿದ್ದ ನೇತ್ರಾವತಿ ನದಿಯಲ್ಲಿ ಐವರು ಸ್ನೇಹಿತರೊಂದಿಗೆ ಭಾನುವಾರ ಈಜಲು ಹೋಗಿ ನೀರುಪಾಲಾದ ಯುವಕ ಅಶ್ವಿತ್(19) ಮೃತದೇಹ ಬುಧವಾರ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಪತ್ತೆಯಾಗಿದೆ.

ಸಜಿಪಪಡುವಿನ ತಲೆಮೊಗರು ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವಿನ ನಾಮಕರಣ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿತ್  ಗೆಳೆಯರೊಂದಿಗೆ ಸಮೀಪದ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದಾರೆ. ಜತೆಯಲ್ಲಿದ್ದ ಯುವಕರು ಹರ್ಷನನ್ನು ರಕ್ಷಿಸಿ ಮೇಲಕ್ಕೆತ್ತಿದ್ದರು. ಅಶ್ವಿತ್ ನಾಪತ್ತೆಯಾಗಿದ್ದರು.‌

ಸತತ ಮೂರು ದಿನಗಳಿಂದ ಪೊಲೀಸ್, ಅಗ್ನಿಶಾಮಕ ದಳ ಸಿಬ್ಬಂದಿ, ಸ್ಥಳೀಯರ ಸಹಾಯದಿಂದ ಹುಡುಕಾಟವನ್ನು ನಡೆಸಲಾಗಿದ್ದು, ಇಂದು ಯುವಕನ ಶವ ಪತ್ತೆಯಾಗಿದೆ.

- Advertisement -

Latest News

error: Content is protected !!