Friday, June 5, 2026
Homeಕರಾವಳಿಉಡುಪಿಉಡುಪಿ: ಉದ್ಯೋಗ ಸಿಗದೆ ಮಾನಸಿಕ ಖಿನ್ನತೆಗೆ ಒಳಗಾದ ಮೆಕ್ಯಾನಿಕಲ್ ಇಂಜಿನಿಯರ್ ನಾಪತ್ತೆ

ಉಡುಪಿ: ಉದ್ಯೋಗ ಸಿಗದೆ ಮಾನಸಿಕ ಖಿನ್ನತೆಗೆ ಒಳಗಾದ ಮೆಕ್ಯಾನಿಕಲ್ ಇಂಜಿನಿಯರ್ ನಾಪತ್ತೆ

- Advertisement -
- Advertisement -

ಉಡುಪಿ: ಉದ್ಯೋಗ ಸಿಗದೆ  ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮೆಕ್ಯಾನಿಕಲ್ ಇಂಜಿನಿಯರೊಬ್ಬರು ನಾಪತ್ತೆಯಾಗಿರುವ ಘಟನೆ ಉಡುಪಿ ನಗರದಲ್ಲಿ ಜೂ.24ರಂದು ಬೆಳಗ್ಗೆ 11.30ರ ಸುಮಾರಿಗೆ ನಡೆದಿದೆ.

ಉಡುಪಿ ಜಿಲ್ಲಾಸ್ಪತ್ರೆಯ ಫಾರ್ಮಾಸಿಸ್ಟ್ ಉಮೇಶ ನಾರಾಯಣ ಭಿರ್ತಿ ಎಂಬವರ ಮಗ ಆಯುಷ್ (22) ನಾಪತ್ತೆಯಾದ ವ್ಯಕ್ತಿ.

ಇವರು ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿ ಕೆಲಸದ ಹುಡುಕಾಟದಲ್ಲಿದ್ದು, ಕೆಲಸ ಸಿಗದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಜೂ.24ರಂದು ಬೆಳಗ್ಗೆ ತಂದೆಯೊಂದಿಗೆ ಜಿಲ್ಲಾಸ್ಪತ್ರೆಗೆ ಬಂದಿದ್ದ ಆಯುಷ್, ಹೊರಗಡೆ ತಿರುಗಾಡಿ ಬರುವುದಾಗಿ ಹೇಳಿ ಹೋದವರು ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ. ಇವರ ಮೊಬೈಲ್ ಕೂಡ ಸಂಪರ್ಕಕ್ಕೂ ಸಿಗುತ್ತಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!