Friday, June 5, 2026
Homeಕರಾವಳಿಮೂಡಬಿದಿರೆ; ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಯುವಕನ ಕೊಲೆ

ಮೂಡಬಿದಿರೆ; ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಯುವಕನ ಕೊಲೆ

- Advertisement -
- Advertisement -

ಮೂಡಬಿದಿರೆ;ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ಮೂಡಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಜಮಾಲ್ ಮೃತ ಯುವಕ.ಜಮಾಲ್ ನ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಜಮಾಲ್ ಮತ್ತು ಸುಹೈಬ್ ಮನೆ ಅಕ್ಕಪಕ್ಕದಲ್ಲಿದ್ದು ಸಣ್ಣ ಮಕ್ಕಳ ವಿಚಾರವಾಗಿ ಇಂದು ಬೆಳಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ ಮಾತಿಕ ಚಕಮಕಿ ನಡೆದು ಜಮಾಲ್ ಹೊಟ್ಟೆಗೆ ಸುಹೈಬ್ ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಸುಹೈಬ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.ಈ ಕುರಿತು ಮೂಡಬಿದಿರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!