Friday, June 5, 2026
Homeತಾಜಾ ಸುದ್ದಿಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಬರ್ಬರ ಹತ್ಯೆ

- Advertisement -
- Advertisement -

ಶಿವಮೊಗ್ಗ; ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಲಿಯಾಸ್ ನಗರದ ನೂರು ಅಡಿ ರಸ್ತೆ ಬಳಿ ನಡೆದಿದೆ.

ಶಿವಮೊಗ್ಗದ ಮಂಡ್ಲಿ ನಿವಾಸಿ ಆಸೀಫ್ (25)ಮೃತ ಯುವಕ.ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಜಬಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಅಸೀಫ್ ಇಲಿಯಾಸ್ ನಗರಕ್ಕೆ ಬಂದಿದ್ದ ವೇಳೆ ಅದೇ ಏರಿಯಾದ ಜಬೀ ಎಂಬಾತ ದಾಳಿ ನಡೆಸಿ, ಹಲ್ಲೆ ಮಾಡಿ ಕೊಲೆಗೈದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದ ಆಟೋ ಡ್ರೈವರ್ ಅಸೀಫ್ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಅಸೀಫ್ ಮೃತದೇಹವನ್ನು ಮೆಗ್ಗಾನ್ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ‌‌.

ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಮಿಥುನ್‌ ಕುಮಾರ್, ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಈ ಕೃತ್ಯ ಎಸಗಲಾಗಿದೆ.
ಅಲ್ಲದೆ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.ಪ್ರಕರಣ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಗೆ ವಿಚಾರಣೆ ನಡೆಸಲಾಗುತ್ತಿದ್ದು, ಕೃತ್ಯದ ಹಿಂದಿನ‌ ಕಾರಣ ತನಿಖೆಯಿಂದ ಬಯಲಾಗಬೇಕಿದೆ.

- Advertisement -

Latest News

error: Content is protected !!