Thursday, June 4, 2026
Homeಕರಾವಳಿಸುಳ್ಯ; ಕನಕಮಜಲಿನಲ್ಲಿ ಯುವಕನೋರ್ವನ ಹುಚ್ಚಾಟ: ಕೈಯಲ್ಲಿ ತಲ್ವಾರ್ ಹಿಡಿದು ಊರಿಡೀ ಸುತ್ತಾಟ

ಸುಳ್ಯ; ಕನಕಮಜಲಿನಲ್ಲಿ ಯುವಕನೋರ್ವನ ಹುಚ್ಚಾಟ: ಕೈಯಲ್ಲಿ ತಲ್ವಾರ್ ಹಿಡಿದು ಊರಿಡೀ ಸುತ್ತಾಟ

- Advertisement -
- Advertisement -

ಸುಳ್ಯ: ದ.ಕ ಜಿಲ್ಲೆಯಲ್ಲಿ ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.144 ಸೆಕ್ಷನ್ ಜಾರಿಯಲ್ಲಿದೆ. ಹೀಗಿದ್ದರೂ ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ಸಂದೀಪ್ ಎಂಬ ಯುವಕನೋರ್ವ ತಲ್ವಾರ್ ಹಿಡಿದು ಊರಿಡೀ ಸುತ್ತಾಡಿ ಹುಚ್ಚಾಟ ಮೆರೆದಿದ್ದಾನೆ.

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ದಾಂಜಲಿ ಅರ್ಪಿಸಲು ಬ್ಯಾನರ್ ಅಳವಡಿಸುವ ವೇಳೆ  ಪ್ಲ್ಯಾಸ್ಟಿಕ್ ಬ್ಯಾನರ್ ಬಳಸದಂತೆ ಗ್ರಾಮ ಪಂಚಾಯತ್ ನಿಂದ ತಿಳಿಸಲಾಗಿತ್ತು, ಆದರೆ ಸಂದೀಪ್ ಮತ್ತು ಕೆಲವರು ಪ್ಲಾಸ್ಟಿಕ್ ಬ್ಯಾನರ್ ಅಳವಡಿಸಿದ್ದರು. ಇದನ್ನು ಪಂಚಾಯತ್ ನಿರ್ದೇಶನದಂತೆ ತೆರವುಗೊಳಿಸಲಾಗಿದ್ದು, ಇದರಿಂದ ಕೋಪಗೊಂಡ ಸಂದೀಪ್ ಎಂಬಾತ ತಲ್ವಾರ್ ಪ್ರದರ್ಶಿಸಿದ್ದಾನೆ ಎನ್ನಲಾಗಿದೆ.

- Advertisement -

Latest News

error: Content is protected !!