Sunday, June 7, 2026
Homeಕರಾವಳಿಪುತ್ತೂರು : ಯುವತಿಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿ ಹಲ್ಲೆ; ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಪುತ್ತೂರು : ಯುವತಿಯೊಂದಿಗೆ ಸಂಬಂಧವಿದೆ ಎಂದು ಆರೋಪಿಸಿ ಹಲ್ಲೆ; ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

- Advertisement -
- Advertisement -

ಪುತ್ತೂರು : ತನ್ನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಾಡಾವು ಬಳಿಯ ಕಟ್ಟತ್ತಾರಿನಲ್ಲಿ ನಡೆದಿದೆ. ಅಬ್ದುಲ್‌ ನಾಸಿರ್‌ ಆತ್ಮಹತ್ಯೆಗೆ ಯತ್ನಿಸಿದ ಯುವಕ.

ಬೆಳ್ಳಾರೆಯ ಅದ್ರಾಂ ಎಂಬವರ ಮನೆಯಲ್ಲಿ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅಲ್ಲಿ ಅದ್ರಾಂ ಕುಟುಂಬದ ಯುವತಿಯೊಂದಿಗೆ ನಾಸಿರ್ ಗೆ ಸಂಬಂಧವಿದೆ ಎಂದು ಆರೋಪಿಸಿ ಹಲ್ಲೆ ಮಾಡಿದ್ದರು. ಇದರಿಂದ ಮನನೊಂದ ನಾಸಿರ್ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿ ತನ್ನ ವಿರುದ್ಧ ಸುಮ್ಮನೆ ಆರೋಪ ಮಾಡಿದ್ದಾರೆಂದು ಹೇಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ನಾಸಿರ್ ಸ್ಥಿತಿ ಗಂಭೀರವಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!