Thursday, June 4, 2026
Homeಕರಾವಳಿಬಂಟ್ವಾಳ: ನೇತ್ರಾವದಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪುತ್ತೂರಿನ ಯುವಕ

ಬಂಟ್ವಾಳ: ನೇತ್ರಾವದಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪುತ್ತೂರಿನ ಯುವಕ

- Advertisement -
- Advertisement -

ಬಂಟ್ವಾಳ: ನೇತ್ರಾವದಿ ನದಿಗೆ ಹಾರಿ ಪುತ್ತೂರಿನ ಯುವಕ  ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಾಣೆ ಮಂಗಳೂರಿನಲ್ಲಿ ನಡೆದಿದೆ. ಪುತ್ತೂರಿನ ಆನಂದ ಎಂಬವರ ಪುತ್ರ ನಿಶ್ಚಿತ್ ಆತ್ಮಹತ್ಯೆಗೆ ಯತ್ನಿಸಿದ ಯುವಕ.

ಎಂ ಎಸ್ ಡಬ್ಲ್ಯು ಪದವೀಧರನಾಗಿದ್ದ ನಿಶ್ಚಿತ, ಸೂಕ್ತ ಉದ್ಯೋಗ ದೊರೆಯದ ಹಿನ್ನಲೆಯಲ್ಲಿ ಮಾನಸಿಕ ಖಿನ್ನತೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿದ್ದಾನೆ ಎನ್ನಲಾಗಿದೆ.

ದ್ವಿಚಕ್ರ ವಾಹನದಲ್ಲಿ ಬಂದಿದ್ದ ಈತ ವಾಹನ ನಿಲ್ಲಿಸಿ ನದಿಗೆ ಹಾರುವ ಸಿದ್ದತೆಯಲ್ಲಿದ್ದಾಗ ಗಮನಿಸಿದ ಸ್ಥಳೀಯ ನಿವಾಸಿ ಯುವಕರಾದ ಹನೀಫ್@ಹನೀಫ್ ಬಾಯಿ, ಸಲ್ಮಾನ್ ಫಾರಿಸ್, ಇರ್ಫಾನ್ ಖಲೀಲ್, ನೌಫಲ್ ಸಿ ಪಿ, ತಸ್ಲೀಂ ಆರೀಫ್, ಮುಖ್ತಾರ್ ಅಕ್ಕರಂಗಡಿ, ಪಿ.ಎಂ. ಆರಿಫ್ ಹಾಗೂ ಮಮ್ಮು ಗೂಡಿನಬಳಿ ಅವರ ತಂಡ ಸಕಾಲದಲ್ಲಿ ಕಾರ್ಯಪ್ರವೃತ್ತರಾಗಿ ನಿಶ್ಚಿತ್ ನನ್ನು ಆತ್ಮಹತ್ಯೆಯ ದವಡೆಯಿಂದ ಪಾರು ಮಾಡಿ 112 ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!