Saturday, June 13, 2026
Homeಕರಾವಳಿಮಂಗಳೂರುಸುಳ್ಯ; ಚಾಲನ ಪರವಾನಗಿ ಅಮಾನತುಗೊಳಿಸಿದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್; ಆತ್ಮಹತ್ಯೆಗೆ ಯತ್ನಿಸಿದ ಯುವಕ

ಸುಳ್ಯ; ಚಾಲನ ಪರವಾನಗಿ ಅಮಾನತುಗೊಳಿಸಿದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್; ಆತ್ಮಹತ್ಯೆಗೆ ಯತ್ನಿಸಿದ ಯುವಕ

- Advertisement -
- Advertisement -

ಸುಳ್ಯ; ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಸುಳ್ಯ ನಿವಾಸಿ  ರಕ್ಷಿತ್ ಜಿ (29)  ಅವರ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತುಗೊಳಿಸಿದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್ ಆದ್ದರಿಂದ ಮನನೊಂದು ಅವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ವೈರಲ್ ಅಗಿರುವುದನ್ನು, ಮನೆಯಲ್ಲಿದ್ದಾಗ ಗಮನಿಸಿದ ರಕ್ಷಿತ್ ಜಿ ಇದರಿಂದ ಬೇಸರಗೊಂಡು ವಿಷ ಸೇವನೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ

- Advertisement -

Latest News

error: Content is protected !!