Tuesday, May 7, 2024
Homeಕರಾವಳಿಮಂಗಳೂರುಪುತ್ತೂರು : ಮತಗಟ್ಟೆಯೊಳಗೆ ಫೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್; ಯುವಕನ ವಿರುದ್ಧ ಪ್ರಕರಣ ದಾಖಲು

ಪುತ್ತೂರು : ಮತಗಟ್ಟೆಯೊಳಗೆ ಫೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್; ಯುವಕನ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಪುತ್ತೂರು : ಮತಗಟ್ಟೆಯೊಳಗೆ ಫೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ ಯುವಕನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮತಗಟ್ಟೆಯೊಳಗೆ ಮೊಬೈಲ್ ಬಳಕೆಗೆ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದ್ದರೂ ಕಾನೂನು ಉಲ್ಲಂಘನೆ ಮಾಡಿ ಮತದಾನ ಮಾಡುವ ಫೋಟೊ ಮೊಬೈಲ್‍ನಲ್ಲಿ ತೆಗೆದು ಅದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಘಟನೆಯೊಂದು ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ಮಾಡಿರುವ ಆರ್ಯಾಪು ನಿವಾಸಿ ರಂಜಿತ್ ಬಂಗೇರಾ ಎಂಬಾತ ತಾನು ಮತದಾನ ಮಾಡುವ ಸಮಯದಲ್ಲಿ ತನ್ನ ಬೆರಳು ಹಾಗೂ ಮತಯಂತ್ರದ ಫೋಟೊ ಸಹಿತ ಮತ ಚಲಾಯಿಸುವ ಫೋಟೊವನ್ನು ತೆಗೆದು ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದನು.ಈ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್-2 ರ ಉಸ್ತುವಾರಿ ಅಧಿಕಾರಿಯವರು ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!