Wednesday, June 24, 2026
Homeಉತ್ತರ ಕನ್ನಡಪ್ರೀತಿಸುತ್ತಿದ್ದ ಯುವತಿ ಮದುವೆ ನಿರಾಕರಣೆ: ಪೌರೋಹಿತ್ಯ ಮಾಡುತ್ತಿದ್ದ ಯುವಕ ಆತ್ಮಹತ್ಯೆಗೆ ಶರಣು

ಪ್ರೀತಿಸುತ್ತಿದ್ದ ಯುವತಿ ಮದುವೆ ನಿರಾಕರಣೆ: ಪೌರೋಹಿತ್ಯ ಮಾಡುತ್ತಿದ್ದ ಯುವಕ ಆತ್ಮಹತ್ಯೆಗೆ ಶರಣು

- Advertisement -
- Advertisement -

ಉತ್ತರಕನ್ನಡ; ಪ್ರೀತಿಸುತ್ತಿದ್ದ ಯುವತಿ ಮದುವೆ ನಿರಾಕರಿಸಿದ್ದಕ್ಕೆ ಪೌರೋಹಿತ್ಯ ಮಾಡುತ್ತಿದ್ದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ನಡೆದಿದೆ. ಪವನ್ ಭಟ್ (24) ಮೃತ ಯುವಕ.

ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಮದುವೆಯಾಗುವಂತೆ ಆಕೆಯನ್ನು ಒತ್ತಾಯಿಸಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ .ಇದರಿಂದ ಮನನೊಂದ ಪವನ್ ಭಟ್‌ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!