Monday, June 8, 2026
Homeಕರಾವಳಿಬೆಳ್ತಂಗಡಿಯಲ್ಲಿ ವಿದ್ಯುತ್ ಅವಘಡ: 23 ವಯಸ್ಸಿನ ಯುವಕ ಸಾವು

ಬೆಳ್ತಂಗಡಿಯಲ್ಲಿ ವಿದ್ಯುತ್ ಅವಘಡ: 23 ವಯಸ್ಸಿನ ಯುವಕ ಸಾವು

- Advertisement -
- Advertisement -

ಬೆಳ್ತಂಗಡಿ: ವಿದ್ಯುತ್ ಶಾಕ್ ನಿಂದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೌಡಂಗೆ ಮನೆಯ ಚನನ ಗೌಡ ಎಂಬವರ ಪುತ್ರ ಅವಿನಾಶ್ ಗೌಡ (23) ಎಂದು ಗುರುತಿಸಲಾಗಿದೆ.

ಅವಿನಾಶ್ ಮೇಸ್ತ್ರಿ ಕೆಲಸದ ಜೊತೆಗೆ ಇಲೆಕ್ಟ್ರಿಷಿಯನ್ ಸಹಾಯಕನಾಗಿ ಕೂಡ ಕೆಲಸ ಮಾಡುತ್ತಿದ್ದರು. ಸಂಜೆ ವೇಳೆ ಅವರಿಗೆ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!