Saturday, June 6, 2026
Homeಕರಾವಳಿಸುಳ್ಯ: ಕೆವಿಜಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆ

ಸುಳ್ಯ: ಕೆವಿಜಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಯುವಕ ಆತ್ಮಹತ್ಯೆ

- Advertisement -
- Advertisement -

ಸುಳ್ಯ: ತಾಲೂಕಿನ ಹೆಸರಾಂತ ಕೆವಿಜಿ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಯುವಕನೊರ್ವ ಆತ್ಮಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಂಜೆ ಸುಮಾರು 4.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತ ಯುವಕನನ್ನು ಕೊಲ್ಲಮೊಗ್ರ ನಿವಾಸಿ ಸತ್ತಾರ್‌‌‌ (35) ಎಂದು ಗುರುತಿಸಲಾಗಿದೆ.

ಸತ್ತಾರ್‌ ಅವರು ಮಾನಸಿಕ ಅಸ್ವಸ್ಥರಾಗಿದ್ದು, ಎರಡು ದಿನಗಳ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಇದ್ದಕ್ಕಿಂದತೆ ಕಟ್ಟಡ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ತಕ್ಷಣ ಆಸ್ಪತ್ರೆಯೊಳಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತ್ತಾದರೂ ಆ ವೇಳೆ ಅವರು ಸಾವನ್ನಪ್ಪಿದ್ದಾರೆ.

ಘಟನೆಯ ಬಗ್ಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!