- Advertisement -
![]()
- Advertisement -
ಕುಂದಾಪುರ: ಪುರಾಣ ಪ್ರಸಿದ್ಧ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಾಸ್ಥಾನದ ಬಾವಿಯ ಹಗ್ಗವನ್ನು ಉಪಯೋಗಿಸಿ ದೇವಳದ ಪ್ರಾಂಗಣದಲ್ಲಿ ಯುವನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಪ್ರತಿ ದಿನ ದೇವಸ್ಥಾನಕ್ಕೆ ತಪ್ಪದೆ ಭೇಟಿ ನೀಡುತ್ತಿದ್ದ ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35) ಆತ್ಮಹತ್ಯೆ ಮಾಡಿಕೊಂಡ ಯುವಕ.
ಸೆಂಟ್ರಿಂಗ್ ಕೆಲಸಗಳಿಗೆ ಹೋಗುತ್ತಿದ್ದ ಚಂದ್ರ ಪೂಜಾರಿ ಇತ್ತೀಚಿನ ದಿನಗಳಲ್ಲಿ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ದೇವಸ್ಥಾನದ ಕಸ ಗುಡಿಸುವ ಕೆಲಸಗಾರರು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ. ಕೋಟ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನೆಡೆಸಿದ್ದಾರೆ.
- Advertisement -


