Saturday, June 6, 2026
Homeತಾಜಾ ಸುದ್ದಿಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಖ್ಯಾತ ನಟಿ

ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಖ್ಯಾತ ನಟಿ

- Advertisement -
- Advertisement -

ಹೈದರಾಬಾದ್: ಇಲ್ಲಿಯ ಎಸ್.ಆರ್. ನಗರದ ಮಧುರಾ ನಗರದಲ್ಲಿರುವ ನಿವಾಸದಲ್ಲಿ ತೆಲುಗಿನ ಖ್ಯಾತ ಕಿರುತೆರೆ ನಟಿ ಶ್ರಾವಣಿ ಕೊಂಡಪಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಮೌನರಾಗಂ’, ‘ಮನಸು ಮಮತ’ ಧಾರಾವಾಹಿಗಳ ಮೂಲಕ ಮನೆ ಮಾತಾಗಿದ್ದ ಶ್ರಾವಣಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದ ಕಾಕಿನಾಡ ಮೂಲದ ಶ್ರಾವಣಿ ಹೈದರಾಬಾದ್ ನಲ್ಲಿ ನೆಲೆಸಿದ್ದರು.

ದೇವರಾಜರೆಡ್ಡಿ ಎಂಬಾತ ಪ್ರೀತಿಸುವ ನಾಟಕವಾಡಿ ಆಕೆಯೊಂದಿಗೆ ತೆಗೆಸಿಕೊಂಡ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ ಹಣ ಪಡೆದುಕೊಳ್ಳುತ್ತಿದ್ದ ಎಂದು ನಟಿ ದೂರು ನೀಡಿದ್ದಳು. ಆತನ ಕಿರುಕುಳ ಹೆಚ್ಚಾದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!