Wednesday, June 24, 2026
Homeಅಪರಾಧಟಿಪ್ಪರ್ ಲಾರಿ ಹರಿದು ಯುವತಿ ಸ್ಥಳದಲ್ಲೇ ಮೃತ್ಯು

ಟಿಪ್ಪರ್ ಲಾರಿ ಹರಿದು ಯುವತಿ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಸುರತ್ಕಲ್: ದ್ವಿಚಕ್ರ ಸಹ ಸವಾರೆಯೊಬ್ಬರು ಟಿಪ್ಪರ್ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಎಂ.ಆರ್.ಪಿ.ಎಲ್. ಕಾರ್ಗೋ ಗೇಟ್ ಬಳಿ ಬುಧವಾರ ಮಧ್ಯಾಹ್ನ ವರದಿಯಾಗಿದೆ.

ಮೃತ ದುರ್ದೈವಿಯನ್ನ ಉತ್ತರ ಕನ್ನಡ ಮೂಲದ ಪ್ರಸ್ತುತ ಕಾಟಿಪಳ್ಳ ಕೈಕಂಬದಲ್ಲಿ ವಾಸವಿರುವ ಶ್ವೇತಾ (20) ಎನ್ನಲಾಗಿದೆ.

ಶ್ವೇತಾ ಅವರು ತನ್ನ ಸಹೋದರನ ಬೈಕ್ ನಲ್ಲಿ ಕಾಟಿಪಳ್ಳ ಕೈಕಂಬದಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಸಂದರ್ಭ ಹಿಂದಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ಅಡಿಗೆ ಬಿದ್ದಿದ್ದು, ಬೈಕ್ ಚಲಾಯಿಸುತ್ತಿದ್ದ ಅವರ ಸಹೋದರ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಶ್ವೇತಾ ಅವರ ಹೊಟ್ಟೆಯ ಮೇಲ್ಭಾಗದಿಂದ ಲಾರಿ ಹರಿದಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ಘಟನೆ ನಡೆಯುತ್ತಿದ್ದಂತೆ ಲಾರಿ ಚಾಲಕನು ತನ್ನ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Latest News

error: Content is protected !!