ಕಾರವಾರ: ಕುಡಿದ ಮತ್ತಿನಲ್ಲಿ ಅಣ್ಣನನ್ನೇ ತಮ್ಮ ಕೊಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹುತ್ತಾರ್‌ನಲ್ಲಿ ನಡೆದಿದೆ.ತ್ಯಾಗರಾಜ ಗಣಪತಿ ಮುಕ್ರಿ (30) ಎಂಬವರನ್ನು ತಮ್ಮ ಶಿವರಾಜ ಗಣಪತಿ ಮುಕ್ರಿ ಕೊಲೆ ಮಾಡಿದ್ದಾನೆ.
ಮದ್ಯ ಸೇವಿಸಿ ಬಂದಿದ್ದ ಶಿವರಾಜ್ ಮನೆಯಲ್ಲಿ ಗಲಾಟೆ ಮಾಡಿದ್ದಾನೆ. ಈ ವೇಳೆ ಮನೆಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಹಾಕಿದ್ದ. ಯಾಕೆ ಹೀಗೆ ಗಲಾಟೆ ಮಾಡುತ್ತೀಯ ಕಾರಿನ ಗಾಜು ಒಡೆದಿದ್ದು ಏಕೆ ಎಂದು ಅಣ್ಣ ತ್ಯಾಗರಾಜ ಗಣಪತಿ ಮುಕ್ರಿ ಕೇಳಿದ್ದಾರೆ.ಇದಕ್ಕೆ ಸಿಟ್ಟಾದ ಶಿವರಾಜ್ ಅಲ್ಲೇ ಇದ್ದ ಸುತ್ತಿಗೆಯನ್ನು ಬೀಸಿ ಅಣ್ಣನ ತಲೆಗೆ ಬಲವಾಗಿ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ತ್ಯಾಗರಾಜನನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸರ್ಕಾರಿ ಆಸ್ಪತ್ರೆಯಲ್ಲಿ ತ್ಯಾಗರಾಜ ಮೃತಪಟ್ಟಿದ್ದಾರೆ. ಇನ್ನು ಗಲಾಟೆ ತಪ್ಪಿಸಲು ಬಂದ ತ್ಯಾಗರಾಜು ಪತ್ನಿ ಹೇಮಾವತಿ ಮುಕ್ರಿ ಹಾಗೂ ರೋಹಿತ್ ಮಂಜುನಾಥ ಮುಕ್ರಿ ಮೇಲೂ ಶಿವರಾಜ ಹಲ್ಲೆ ನಡೆಸಿದ್ದಾನೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.