Wednesday, May 8, 2024
Homeಕರಾವಳಿಸುಳ್ಯ: ಸಂಪಾಜೆಯಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ; ಅಣ್ಣನನ್ನೇ ಕೊಚ್ಚಿ  ಕೊಲೆಗೈದ ತಮ್ಮಂದಿರು

ಸುಳ್ಯ: ಸಂಪಾಜೆಯಲ್ಲಿ ಆಸ್ತಿ ವಿಚಾರಕ್ಕೆ ಗಲಾಟೆ; ಅಣ್ಣನನ್ನೇ ಕೊಚ್ಚಿ  ಕೊಲೆಗೈದ ತಮ್ಮಂದಿರು

spot_img
- Advertisement -
- Advertisement -

ಸುಳ್ಯ: ಆಸ್ತಿ ವಿಚಾರಕ್ಕೆ ಗಲಾಟೆಯಾಗಿ ಅಣ್ಣನನ್ನು ತಮ್ಮಂದಿರೇ ಚೂರಿಯಿಂದ ಇರಿದು ಕೊಲೆಗೈದ ಘಟನೆ ಮಡಿಕೇರಿ ತಾಲೂಕಿನ ಸಂಪಾಜೆ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕುದ್ರೆಪಾಯ ನಿವಾಸಿ ಕೊಲೆಯಾದವರು.

ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಲೆಗೈದಿದ್ದಾರೆ.

ಉಸ್ಮಾನ್ ಕುದ್ರೆಪಾಯದಲ್ಲಿ ಭೂಮಿ ಹೊಂದಿದ್ದರು. ಅರಂತೋಡಿನಲ್ಲೂ ಇವರಿಗೆ ಜಾಗವಿದೆ ಎನ್ನಲಾಗಿದೆ. ಸದ್ಯ ಇವರು ಪುತ್ತೂರಿನ ಸಂಪ್ಯದಲ್ಲಿ ನೆಲೆಸಿದ್ದರು ಎನ್ನಲಾಗುತ್ತಿದೆ. ಕೊಡಗು ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!