Friday, June 5, 2026
Homeಕರಾವಳಿಉಡುಪಿಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ಸಹೋದರರ ಇಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ಸಹೋದರರ ಇಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

- Advertisement -
- Advertisement -

ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ಸಹೋದರರ ಇಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉಡುಪಿ ಜಿಲ್ಲೆಯ ನಾಲ್ಕೂರು ಗ್ರಾಮದ ಕಜ್ಜೆ ಅರಮನೆ ಜೆಡ್ಡು ಎಂಬಲ್ಲಿ ನಡೆದಿದೆ.

ನಾಲ್ಕೂರು ಗ್ರಾಮದ ಕಜ್ಜೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ (35) ಮೃತ ದುರ್ದೈವಿ. ಮಂಜುನಾಥ್  ತಮ್ಮ ವಿಶ್ವನಾಥ್ (30) ಕೊಲೆ ಮಾಡಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದು, ಆಗಾಗ ಗಲಾಟೆ ಮಾಡುತ್ತಿದ್ದರು. ಮಧ್ಯರಾತ್ರಿ ವೇಳೆ ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದನು. ಇದೇ ವಿಚಾರದಲ್ಲಿ ವಿಶ್ವನಾಥ ಕೋಪ ಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.

ಇದರ ಪರಿಣಾಮ ಮಂಜುನಾಥ್ ಅವರ ತಲೆಯಿಂದ ತೀವ್ರ ರಕ್ತ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ ಟಿ.ಎಂ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!