Wednesday, July 15, 2026
Homeಕರಾವಳಿಉಡುಪಿಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದಾತ ಅರೆಸ್ಟ್

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದಾತ ಅರೆಸ್ಟ್

- Advertisement -
- Advertisement -

ಉಡುಪಿ: ಜ.23ರಂದು ಉಡುಪಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35) ಬಂಧಿತ ಆರೋಪಿ.

ಜ.23ರಂದು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.ಆರೋಪಿ  ಅಪರಿಚಿತನಾಗಿದ್ದರಿಂದ, ಆರೋಪಿತನ ಪತ್ತೆಗೆ ಪೊಲೀಸರ ಐದು ತಂಡಗಳನ್ನು ರಚಿಸಲಾಗಿತ್ತು. ಹಲವಾರು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿ ಆರೋಪಿಯ ಮಾಹಿತಿಯನ್ನು ಸಾರ್ವಜನಿಕರಿಗೂ ಪ್ರಚಾರಪಡಿಸಲಾಗಿತ್ತು.

ಸಾರ್ವಜನಿಕರ ಸಹಾಯ ಮತ್ತು ಪೊಲೀಸ್‌ ಅಧಿಕಾರಿ, ಸಿಬ್ಬಂದಿಸತತ ಪ್ರಯತ್ನದಿಂದ, ಜ. 26ರ ಭಾನುವಾರ ಸಂಜೆ ಆರೋಪಿ ಮುತ್ತುನನ್ನು ಉಡುಪಿ ಶ್ರೀಕೃಷ್ಣ ಮಠದ ಪರಿಸರದ ವಾದೀರಾಜ 3ನೇ ಕ್ರಾಸ್‌ ಬಳಿ ಬಂಧಿಸಲಾಗಿದೆ.ಆರೋಪಿ ಉಡುಪಿಯಲ್ಲಿ ಯಾವುದೇ ವಿಳಾಸವನ್ನು ಹೊಂದದೆ ಅಲೆಮಾರಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!