Wednesday, June 3, 2026
Homeಕರಾವಳಿಮಂಗಳೂರುಕಡಬ; ನೆಲ್ಯಾಡಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ

ಕಡಬ; ನೆಲ್ಯಾಡಿಯಲ್ಲಿ ಬಾಡಿಗೆ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ

- Advertisement -
- Advertisement -

ಕಡಬ; ಬಾಡಿಗೆ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ಪುತ್ಯೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಛತ್ತೀಸ್‌ಘಡ ಮೂಲದ ನವೀನ್ ಕುಮಾರ್(29) ಮೃತ ಯುವಕ.

ಛತ್ತೀಸ್‌ಘಡ ರಾಜ್ಯದ ಪಾಲಿ ತಾಲೂಕಿನ ಕಟಪುರ ನಿವಾಸಿ ಆತ್ಮಹತ್ಯೆಯಾಗಿರುವ ನವೀನ್ ಕುಮಾರ್ ಹಾಗೂ ಛತ್ತೀಸ್‌ಘಡ ಮೂಲದ ಇತರರು ನೆಲ್ಯಾಡಿ ಗ್ರಾಮದ ಪುತ್ಯೆ  ಎಂಬಲ್ಲಿ ಪದ್ಮಾನಂದ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದರು.  ನವೀನ್‌ಕುಮಾರ್ ಜೊತೆಗಿದ್ದ ವಿಜಯಕುಮಾರ್ ಹಾಗೂ  ಅವರ ತಮ್ಮ ಆಶಿಶ್ ಕುಮಾರ್ ಫೆ.15ರಂದು ರಾತ್ರಿ ಊಟ ಮಾಡಿ ಮಲಗಿದ್ದು ಈ ವೇಳೆ ನವೀನ್ ಕುಮಾರ್ ಫೋನಿನಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದೆ.

ವಿಜಯಕುಮಾರ್ ಅವರಿಗೆ ರಾತ್ರಿ 2.40 ಗಂಟೆಗೆ ಎಚ್ಚರವಾದಾಗ ನವೀನ್ ಕುಮಾರ್ ಮನೆಯಲ್ಲಿ ಇಲ್ಲದೇ ಇದ್ದು, ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು. ಫೆ.16ರಂದು ಬೆಳಿಗ್ಗೆ ಬಾಡಿಗೆ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿ ಖಾಲಿ ಜಾಗದಲ್ಲಿದ್ದ ಮರವೊಂದಕ್ಕೆ  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.   ಮನೆಯ ಹಣಕಾಸಿನ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ  ವಿಜಯ ಕುಮಾರ್ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!