Tuesday, June 23, 2026
Homeಕರಾವಳಿಉಡುಪಿಉಡುಪಿ: ಮಣಿಪಾಲದಲ್ಲಿ ಮೆಸ್ಕಾಂ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ

ಉಡುಪಿ: ಮಣಿಪಾಲದಲ್ಲಿ ಮೆಸ್ಕಾಂ ಕಟ್ಟಡದಿಂದ ಜಿಗಿದು ಯುವಕ ಆತ್ಮಹತ್ಯೆ

- Advertisement -
- Advertisement -

ಉಡುಪಿ: ಮೆಸ್ಕಾಂ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರವಿ ಮೊಹಂತ್ (24) ಮೃತ ಯುವಕ.

ರವಿ ಮೊಹಂತ್ ಕಾಂಕ್ರೀಟ್ ಸಾಗಾಟದ ಲಾರಿಯ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಮಣಿಪಾಲ ಪೊಲೀಸ್ ಠಾಣೆಯ ಎ ಎಸ್ ಐ ನಾಗೇಶ್ ನಾಯ್ಕ್, ತನಿಖಾ ಸಹಾಯಕ ಸುಕುಮಾರ್ ಶೆಟ್ಟಿ ಆಗಮಿಸಿ ಪರಿಶೀಲನೆ ನಡೆಸಿದರು. ಮಣಿಪಾಲ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!