Saturday, August 8, 2026
Homeಚಿಕ್ಕಮಗಳೂರುಕೊಟ್ಟಿಗೆಹಾರ: ಲಾರಿಗೆ ಕಾರು ಡಿಕ್ಕಿಯಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ತುಮಕೂರಿನ ಮೂವರು ಯುವಕರು ದುರ್ಮರಣ;ಇಬ್ಬರಿಗೆ ಗಂಭೀರ ಗಾಯ

ಕೊಟ್ಟಿಗೆಹಾರ: ಲಾರಿಗೆ ಕಾರು ಡಿಕ್ಕಿಯಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ತುಮಕೂರಿನ ಮೂವರು ಯುವಕರು ದುರ್ಮರಣ;ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹಳಿಲ್ ಗದ್ದೆ ಗ್ರಾಮದ ಜ್ಞಾನೇಶ್(28), ಮೋಹನ್(30) ಹಾಗೂ ಗುರುಕಿರಣ್(28) ಮೃತಪಟ್ಟ ಯುವಕರು. ಗಂಭೀರವಾಗಿ ಗಾಯಗೊಂಡಿರುವ ಪ್ರೇಮ್ ಹಾಗೂ ಹೃತಿಕ್ ಅವರನ್ನು ತುರ್ತು ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂಬದಿಯಿಂದ ಕಾರು ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳೀಯ ಸಾರ್ವಜನಿಕರು ತಕ್ಷಣ ಧಾವಿಸಿ ಗಾಯಾಳುಗಳನ್ನು ಹಾಗೂ ಮೃತದೇಹಗಳನ್ನು ಹೊರತೆಗೆಯಲು ನೆರವಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -

Latest News

error: Content is protected !!