Wednesday, June 3, 2026
Homeಚಿಕ್ಕಮಗಳೂರುಚಿಕ್ಕಮಗಳೂರಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕ ಸಾವು

ಚಿಕ್ಕಮಗಳೂರಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕ ಸಾವು

- Advertisement -
- Advertisement -

ಚಿಕ್ಕಮಗಳೂರಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕ ಸಾವನ್ನಪ್ಪಿದ ಘಟನೆ ನಡೆದಿದೆ. ಗಿರೀಶ್ (25) ಮೃತ ಯುವಕ.

ಕಳೆದ ವಾರ ಗಿರೀಶ್  ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದರು. ಮೊನ್ನೆ ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಗಿರೀಶ್ ಸಾವನ್ನಪ್ಪಿದ್ದಾರೆ.ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ನಿವಾಸಿಯಾಗಿದ್ದಾರೆ ಗಿರೀಶ್. ಸದ್ಯ ರಿಷಿಕೇಶ್ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಗಿರೀಶ್ ಮೃತ ದೇಹವಿದೆ. ಕೇದಾರನಾಥ ಪೊಲೀಸರು ಗಿರೀಶ್ ಸಾವನ್ನಪ್ಪಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

ಮೂಡಿಗೆರೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಗಿರೀಶ್ ಕಳೆದ ವಾರ ಕೇದಾರನಾಥಕ್ಕೆ ತೆರಳಿದ್ದರು.

- Advertisement -

Latest News

error: Content is protected !!