Sunday, June 7, 2026
Homeಇತರಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು

ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಸೇವಿಸಿ ತಾಯಿ, ಮಗ ಸಾವು

- Advertisement -
- Advertisement -

ಕಡಪ: ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ನಡೆದಿದೆ.

ಕಡಪಾ ಜಿಲ್ಲೆಯ ಚೆನ್ನೂರ್ ಮಂಡಲದ ಯಲ್ಲಮ್ಮ ಗುಡಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ ಕಾರ್ಮಿಕರಾಗಿದ್ದು, ಮದ್ಯ ಕುಡಿಯುತ್ತಿದ್ದರು.

ಅದರಂತೆ ಭಾನುವಾರ ಸಂಜೆ ಕುಡಿಯಲು ಮದ್ಯ ಸಿಗದಿದ್ದಾಗ ಸಾನಿಟೈಸರ್ ನಲ್ಲೂ ಆಲ್ಕೋಹಾಲ್ ಇರುತ್ತೆ. ಅದನ್ನು ಕುಡಿದರೂ ಕಿಕ್ ಏರುತ್ತೆ ಎಂದು ಸಾನಿಟೈಸರ್ ಕುಡಿದಿದ್ದಾರೆ ಎಂದು ಚೆನ್ನೂರ್ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!