Monday, April 7, 2025
Homeಕರಾವಳಿಮಂಗಳೂರುಸುಳ್ಯ; ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಹುಚ್ಚಾಟ; ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

ಸುಳ್ಯ; ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಹುಚ್ಚಾಟ; ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

spot_img
- Advertisement -
- Advertisement -

ಸುಳ್ಯ; ಚಲಿಸುತ್ತಿದ್ದ ಕಾರಿನಲ್ಲಿ ಯುವಕರು ಹುಚ್ಚಾಟ ಮೆರೆದಿರುವ ಘಟನೆ ಸುಳ್ಯ ಸಮೀಪದ ಮಾಣಿ-ಮೈಸೂರು ಹೆದ್ದಾರಿಯ ಸಂಪಾಜೆಯಲ್ಲಿ ನಡೆದಿದೆ. ಆರು ಜನ ಇರುವ ಯುವಕರ ಗುಂಪೊಂದು ಚಲಿಸುತ್ತಿರುವ ಕಾರಿನ ಮೇಲೆ ನಿಂತು ಅಪಾಯಕಾರಿಯಾಗಿ ಸ್ಟಂಟ್ ಮಾಡಿದೆ.  ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಯುವಕರ ಮೇಲೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.


ಕಾರಿನಲ್ಲಿ ಒಟ್ಟು 7 ಮಂದಿ ಯುವಕರಿದ್ದು ಅದರಲ್ಲಿ ಚಾಲಕ ಬಿಟ್ಟು ಉಳಿದ ಇಬ್ಬರು ಯುವಕರು ವೇಗವಾಗಿ ಚಲಿಸುತ್ತಿರುವ ಕಾರಿನ ಸನ್‌ರೂಫ್‌ನಿಂದ ಹೊರಗೆ ನಿಂತಿದ್ದರೆ, ಇಬ್ಬರು ಹಿಂಬದಿಯ ಬಾಗಿಲುಗಳಿಂದ ಹೊರಗೆ ನೇತಾಡುತ್ತಿರುವುದು ಕಾಣಬಹುದು. ಮತ್ತಿಬ್ಬರು ಯುವಕರು ಮುಂಭಾಗದ ಪ್ರಯಾಣಿಕರ ಬಾಗಿಲುಗಳಿಂದ ಹೊರಬರುತ್ತಿರುವುದು ಕಂಡುಬರುತ್ತದೆ. ಈ ಎಲ್ಲಾ ಯುವಕರು ರಸ್ತೆ ಸುರಕ್ಷತೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ತಮ್ಮ ಜೀವದ ಜೊತೆಗೆ ಇತರರ ಜೀವಕ್ಕೂ ಅಪಾಯವನ್ನುಂಟು ಮಾಡಿದ್ದಾರೆ.

ಈ ವೇಳೆ ಹಿಂಬಾಲಿಸುತ್ತಿದ್ದ ವಾಹನ ಸವಾರರು ಈ ಅಪಾಯಕಾರಿ ಸ್ಟಂಟ್ ಅನ್ನು ಚಿತ್ರೀಕರಿಸಿದ್ದಾರೆ. ಅಧಿಕಾರಿಗಳು ಈ ಯುವಕರನ್ನು ಗುರುತಿಸಿ, ಸಂಚಾರ ನಿಯಮ ಉಲ್ಲಂಘನೆ, ಸಾರ್ವಜನಿಕ ಸುರಕ್ಷತೆಗೆ ಅಪಾಯ ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದಕ್ಕಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.

- Advertisement -
spot_img

Latest News

error: Content is protected !!