- Advertisement -
- Advertisement -
ಮಂಗಳೂರು; ಕುಡುಪಿನಲ್ಲಿ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸೇರಿ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಕುಡುಪಿನಲ್ಲಿ ಕ್ರಿಕೆಟ್ ಮ್ಯಾಚ್ ವೇಳೆ ನಡೆದ ಗಲಾಟೆ ಬಳಿಕ ಗುಂಪೊಂದು ಕೇರಳ ಮೂಲದ ಅಶ್ರಫ್ ಎಂಬವರನ್ನು ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಈ ಪ್ರಕರಣದ ತನಿಖೆಯಲ್ಲಿ ಪೊಲೀಸ್ ಇಲಾಖೆ ನಿರ್ಲಕ್ಷವಹಿಸಿತ್ತು ಎಂದು ಆರೋಪಿಸಲಾಗಿತ್ತು.
ಇದೀಗ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್ ಕೆ ಆರ್, ಹೆಡ್‌ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಪೊಲೀಸ್ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಲಾಗಿದೆ.
- Advertisement -