Thursday, May 2, 2024
Homeಅಪರಾಧಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕರು; ಯುವಕರ ವಿರುದ್ಧ ಪ್ರಕರಣ ದಾಖಲು

ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕರು; ಯುವಕರ ವಿರುದ್ಧ ಪ್ರಕರಣ ದಾಖಲು

spot_img
- Advertisement -
- Advertisement -

ಬಂಟ್ವಾಳ: ಮೂವರು ಯುವಕರು ಮಾದಕ ವಸ್ತುಗಳನ್ನು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಘಟನೆ ನಡೆದಿದ್ದು, ಮೂವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳಾದ ಬಿ.ಸಿ.ರೋಡ್ ಬಳಿಯ ಪರ್ಲಿಯಾ ನಿವಾಸಿ ನವಾಝ್, ನಂದರಬೆಟ್ಟು ನಿವಾಸಿ ಹಾರಿಸ್ ಯಾನೆ ಆಝಾದ್ ಮತ್ತು ಜಸೀಂ ಅವರನ್ನು ಬಂಧಿಸಲಾಗಿದೆ.

ಬಿ.ಸಿ.ರೋಡ್ ನ ಬಸ್ತಿಪಡ್ಡು ಸಾರ್ವಜನಿಕ ಸ್ಥಳದಲ್ಲಿ ಆರೋಪಿಗಳು ಮಾದಕ ವಸ್ತುಗಳನ್ನು ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಗಮನಿಸಿದ ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ಹಾಗೂ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ. ನಂತರದಲ್ಲಿ ಅವರನ್ನು ವಿಚಾರಣೆ ನಡೆಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಮಾದಕ ವಸ್ತುಗಳನ್ನು ಸೇವಿಸಿರುವುದು ಬೆಳಕಿಗೆ ಬಂದಿದೆ.

ಬಂಟ್ವಾಳ ನಗರ ಠಾಣಾ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!