Wednesday, June 24, 2026
Homeಅಪರಾಧಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣ; ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ ಎಂದ ಯೂಟ್ಯೂಬರ್‌ ಸಮೀರ್‌

ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣ; ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ ಎಂದ ಯೂಟ್ಯೂಬರ್‌ ಸಮೀರ್‌

- Advertisement -
- Advertisement -

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ನೀಡುತ್ತೇನೆ ಎಂದು ಯೂಟ್ಯೂಬರ್‌ ಸಮೀರ್‌ ಎಂ.ಡಿ ಹೇಳಿದ್ದಾರೆ.

ಈ ಕುರಿತು ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನನಗೆ ಈವರೆಗೂ ಎಸ್‌ಐಟಿಯಿಂದ ಯಾವುದೇ ನೋಟಿಸ್‌ ಬಂದಿಲ್ಲ. ನನಗೆ ಬೆಳ್ತಂಗಡಿ ಠಾಣೆ ಪೊಲೀಸರಿಂದ ನೋಟಿಸ್‌ ಬಂದಿತ್ತು. ಅದಕ್ಕಾಗಿ ಮೂರು ದಿನ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆಂದು ಹೋಗಿದ್ದೆ. ಎಲ್ಲಾ ವಿಚಾರಣೆ ಮುಗಿದಿದೆ. ಎಲ್ಲಾ ವಿಷಯದ ಬಗ್ಗೆಯೂ ಶೀಘ್ರದಲ್ಲಿಯೇ ಕ್ಲಾರಿಟಿ ಕೊಡುತ್ತೇನೆ ಎಂದು ಹೇಳಿದರು.

ಇನ್ನು ವಿದೇಶದಿಂದ ಫಂಡಿಂಗ್‌ ವಿಚಾರವಾಗಿ ಮಾತನಾಡಿದ ಅವರು, ನಾನು ಆ ವಿಚಾರದ ಬಗ್ಗೆ ಮಾತನಾಡಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕವೇ ಸತ್ಯಾ ಸತ್ಯತೆ ಹೊರಬರುತ್ತದೆ. ಆರೋಪಗಳಿಗೆಲ್ಲಾ ಉತ್ತರ ಕೊಡಲು ಆಗಲ್ಲ. ತನಿಖೆ ಬಳಿಕ ಪೊಲೀಸರೇ ಎಲ್ಲವನ್ನೂ ಬಹಿರಂಗ ಪಡಿಸುತ್ತಾರೆ ಎಂದು ಹೇಳಿದರು.

- Advertisement -

Latest News

error: Content is protected !!