Friday, June 5, 2026
Homeಕರಾವಳಿಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ಕಾವಳಕಟ್ಟೆ ನಿಧನ

ಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ಕಾವಳಕಟ್ಟೆ ನಿಧನ

- Advertisement -
- Advertisement -

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಮೂಲದ ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ಕಾವಳಕಟ್ಟೆ ಇಂದು ವಿಧಿವಶರಾಗಿದ್ದಾರೆ.

60 ವರ್ಷ ಪ್ರಾಯದ ಇವರು ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

ಯಕ್ಷಗಾನ ಜೀವನದ ಕುರಿತು:
ಹೊಸನಗರ ಮೇಳ, ಹಿರಿಯಡ್ಕ, ಮಂಗಳಾದೇವಿ, ಬಪ್ಪನಾಡು, ಸಸಿಹಿತ್ಲು ಮೇಳ ಸೇರಿದಂತೆ ವಿವಿಧ ಮೇಳಗಳಲ್ಲಿ ಸುಮಾರು 15 ವರ್ಷಗಳ ಕಾಲ ಮದ್ದಳೆಗಾರರಾಗಿ ಸೇವೆ ಸಲ್ಲಿಸಿದ್ದ ಇವರು, ಅನಾರೋಗ್ಯದ ಕಾರಣದಿಂದಾಗಿ ಮೇಳದಿಂದ ನಿವೃತ್ತಿ ಪಡೆದಿದ್ದರು.

ಪುಂಜಾಲಕಟ್ಟೆ ಸರಕಾರಿ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಯಾಗಿ ಮತ್ತು ರಿಲಯನ್ಸ್ ಕ್ರಿಕೇಟರ್ಸ್, ಶ್ರೀ ಶಾರದಾಂಬಾ ಯುವಕ ಮಂಡಲದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು.

- Advertisement -

Latest News

error: Content is protected !!